
ನೆಲ್ಯಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಣ್ಣಗುಂಡಿ ಸಮೀಪ ಮಾ.27ರಂದು ಸಂಜೆ ಲಾರಿ, ಕಾರು ಹಾಗೂ ಪಿಕಪ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರು ಹಾಗೂ ಪಿಕಪ್ ಜಖಂಗೊಂಡಿವೆ.

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಕಂಪನಿಯ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿನ ಹಿಂಬದಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಎದುರಿನಿಂದ ಬರುತ್ತಿದ್ದ ಪಿಕಪ್ ವಾಹನವೊಂದಕ್ಕೆ ಡಿಕ್ಕಿಯಾಗಿ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.






