ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ – ಆರೋಪಿ ಪರಾರಿ

ಶೇರ್ ಮಾಡಿ

ಕೊಡಗು ಜಿಲ್ಲೆಯಲ್ಲಿ ಭೀಕರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲ್ಲೂಕಿನ ಬೇಗೂರಿನಲ್ಲಿ ಕತ್ತಿಯಿಂದ ಕಡಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹತ್ಯೆಗೀಡಾದವರು ಕರಿಯ(75), ಗೌರಿ(70), ನಾಗಿ(35) ಹಾಗೂ ಕಾವೇರಿ(5) ಎಂದು ಗುರುತಿಸಲಾಗಿದೆ. ಈ ಭೀಕರ ಕೃತ್ಯಕ್ಕೆ ಗಿರೀಶ್ ಎಂಬ ವ್ಯಕ್ತಿ ಹೊಣೆ ಎಂದು ಶಂಕಿಸಲಾಗಿದೆ.

ನಿನ್ನೆ ರಾತ್ರಿಯೇ ಈ ಹತ್ಯೆ ನಡೆದಿರುವ ಸಾಧ್ಯತೆ ಇದ್ದು, ಬೆಳಿಗ್ಗೆ ಕುಟುಂಬದವರನ್ನು ಕೆಲಸಕ್ಕೆ ಕರೆಯಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಹತ್ಯೆಯಾದ ನಾಗಿಯ ಮೂರನೇ ಪತಿ ಗಿರೀಶ್(35) ಈ ಕೃತ್ಯ ಎಸಗಿರುವ ಅನುಮಾನವಿದೆ. ಕಾಫಿ ತೋಟದ ಲೈನ್ ಮನೆಯಲ್ಲಿ ಈ ಹತ್ಯೆ ನಡೆದಿದ್ದು, ಮನೆಯಲ್ಲಿದ್ದ ಕಾಫಿ ಬೆಳೆ ವಿಚಾರಕ್ಕೆ ಜಗಳವಾಗಿ ಹತ್ಯೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹತ್ಯೆಗೆ ನಿಖರ ಕಾರಣವನ್ನು ತಿಳಿದುಕೊಳ್ಳುವ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹತ್ಯೆ ಮಾಡಿದ ಆರೋಪಿಯಾಗಿರುವ ಗಿರೀಶ್ ಈ ವೇಳೆ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಅವನಿಗಾಗಿ ಬಲೆ ಬೀಸಿದ್ದಾರೆ.

  •  

Leave a Reply

error: Content is protected !!