ಶ್ರೀರಾಮ ವಿದ್ಯಾಲಯದಲ್ಲಿ ಸಾಮೂಹಿಕ ಹುಟ್ಟುಹಬ್ಬ ಆಚರಣೆ

ಶೇರ್ ಮಾಡಿ

ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಸಾಮೂಹಿಕ ಹುಟ್ಟುಹಬ್ಬವನ್ನು ಶನಿವಾರ ಅದ್ಧೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಿಶುಮಂದಿರದ ಸಹಾಯಕಿ ಪುಷ್ಪವತಿ, ಶಿಶುಮಂದಿರದ ಮಾತಾಜಿ ಸುಮಲತಾ ಹಾಗೂ ಶಾಲಾ ಅಡುಗೆ ಸಹಾಯಕಿ ಕುಮುದ ಹಾಜರಾಗಿ, ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ಹಣೆಗೆ ತಿಲಕವಿಟ್ಟು, ಬಾಯಿಗೆ ಸಿಹಿ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯಶಿಕ್ಷಕಿ ಭಾಗೀರಥಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶೈಕ್ಷಣಿಕ ಪ್ರಗತಿ ಹಾಗೂ ಸಂಸ್ಕಾರಗಳ ಮಹತ್ವವನ್ನು ವಿವರಿಸಿದರು.

ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಈ ಸಂಭ್ರಮದಲ್ಲಿ ಪಾಲ್ಗೊಂಡರು. ಶುಭರಾಣಿ ಧನ್ಯವಾದ ಅರ್ಪಿಸಿದರು, ಕುಮಾರಿ ರಮ್ಯಾ ಸ್ವಾಗತಿಸಿ, ಮತ್ತು ಕೋಮಲಾಂಗಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

  •  

Leave a Reply

error: Content is protected !!