

ಅರಂತೋಡು: ತಾಲೂಕಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಎಲಿಮಲೆ-ಅರಂತೋಡು ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾದ 1.25 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕರಾದ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, “ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾದ 8 ಕೋಟಿ ರೂ. ಅನುದಾನದಲ್ಲಿ 1.25 ಕೋಟಿ ರೂ.ವನ್ನು ಈ ರಸ್ತೆಗೆ ಮೀಸಲಿಡಲಾಗಿದೆ. ಈಗಾಗಲೇ ಸರ್ಕಾರಕ್ಕೆ ಮೂರು ಹಂತಗಳಲ್ಲಿ ಪ್ರಸ್ತಾವನೆ ಸಲ್ಲಿಸಿದ್ದು, ಪ್ರತಿ ಬಾರಿಯೂ ಸಚಿವರನ್ನು ಭೇಟಿ ಮಾಡಿ ಈ ರಸ್ತೆಗೆ ವಿಶೇಷ ಅನುದಾನ ಬಿಡುಗಡೆ ಮಾಡಿಸುವ ಬಗ್ಗೆ ಒತ್ತಾಯಿಸುತ್ತಿದ್ದೇನೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಪಕ್ಷದ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪಕ್ಷದ ನಿಕಟಪೂರ್ವ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಮುಖರಾದ ವೆಂಕಟ್ ದಂಬೆಕೊಡಿ, ಮುಳಿಯ ಕೇಶವ ಭಟ್, ಕೃಷ್ಣಯ್ಯ ಮೂಲೆತೋಟ, ವಿನಯ್ ಮುಳುಗಾಡು, ದಿವಾಕರ ಮುಂಡೋಡಿ, ಪಕ್ಷದ ಪ್ರಮುಖರಾದ ರಾಕೇಶ್ ಮೆಟ್ಟಿನಡ್ಕ, ಧನಂಜಯ, ನವೀನ್ ಬಾಳುಗೊಡು, ಹರ್ಷಿತ್ ಕಡ್ತಲ ಕಜೆ, ಇಂಜಿನಿಯರ್ ಪರಮೇಶ್ವರ, ಗುತ್ತಿಗೆದಾರ ಸತೀಸ್ ಬಪ್ಪಳಿಕೆ, ಪಕ್ಷದ ಶಕ್ತಿ ಕೇಂದ್ರ ಪ್ರಮುಖರು, ಬೂತ್ ಸಮಿತಿ ಪ್ರಮುಖರು, ಕಾರ್ಯಕರ್ತರು ಹಾಗೂ ಊರವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.





