ಏ.8ರಂದು ದ್ವಿತೀಯ ಪಿಯುಸಿ ಫಲಿತಾಂಶ

ಶೇರ್ ಮಾಡಿ
SSCL

ಮಾರ್ಚ್ 1ರಿಂದ 10ರ ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಮಂಗಳವಾರ (ಎ.8) ಪ್ರಕಟವಾಗಲಿದೆ. ಮಧ್ಯಾಹ್ನ 1:30 ರಿಂದ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ.

ಈ ಬಾರಿಯ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯನ್ನು ಮಾರ್ಚ್ 1ರಿಂದ 20ರವರೆಗೆ ನಡೆಸಲಾಗಿತ್ತು. ಸದ್ಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಮಂಗಳವಾರ ಮಧ್ಯಾಹ್ನ 12:30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಮಧ್ಯಾಹ್ನ 1:30 ರಿಂದ karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ತಿಳಿಸಿದೆ.

cricket
  •  

Leave a Reply

error: Content is protected !!