

ಬೆಳ್ತಂಗಡಿ: ಧರ್ಮಸ್ಥಳ, ವೇಣೂರು ಸೇರಿದಂತೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಮೂರು ನಕ್ಸಲ್ ಚಟುವಟಿಕೆ ಪ್ರಕರಣಗಳ ಹಿನ್ನೆಲೆಯಲ್ಲಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿಯನ್ನು ಬೆಳ್ತಂಗಡಿ ಪೊಲೀಸರು ಕೇರಳದ ತ್ರಿಶೂರ್ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಕರೆತಂದು ಏಪ್ರಿ.7 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ಶೃಂಗೇರಿ ಮೂಲದ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಟ್ಟು 53 ಪ್ರಕರಣಗಳು, ಚಿಕ್ಕಮಗಳೂರಿನ ಕಳಸ ನಿವಾಸಿ ಸಾವಿತ್ರಿ ವಿರುದ್ಧ 22 ಪ್ರಕರಣಗಳು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
2012-13ರಲ್ಲಿ ನಡೆದ ಬೆಳ್ತಂಗಡಿ, ವೇಣೂರು ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಆರೋಪಗಳಿದ್ದು, ವಾಹನ ದಹನ, ನಕ್ಸಲ್ ಬೆಂಬಲಿತ ಬ್ಯಾನರ್ ಹಾಗೂ ಸ್ಫೋಟಕ ಪತ್ತೆ ಪ್ರಕರಣಗಳಲ್ಲಿ ಇಬ್ಬರನ್ನು ಬಾಡಿ ಆರೆಂಜ್ ಮೂಲಕ ಭದ್ರತೆಯಲ್ಲಿ ಕರೆದು ತರಲಾಗಿತ್ತು.










