

ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಓಮಿನಿ ಕಾರ್ ಒಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ.
ತಾಲೂಕಿನ ಕಾಲೇಜು ಒಂದರ ದಾಖಲಾತಿಗೆ ಆಗಮಿಸುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.











