ನೆಲ್ಯಾಡಿ ಪುತ್ಯೆ ರಸ್ತೆಗೆ 50 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

ಶೇರ್ ಮಾಡಿ

ಶಾಸಕಿ ಭಾಗೀರಥಿ ಮುರುಳ್ಯರಿಂದ ಉದ್ಘಾಟನೆ

Nellyady

ನೆಲ್ಯಾಡಿ: ನೆಲ್ಯಾಡಿ-ಕೊಕ್ಕಡ ಮಾರ್ಗದ ಪುತ್ಯೆ ಎಂಬಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಡೆಯುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಏ.6ರಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಶಿಲಾನ್ಯಾಸ ನೆರವೇರಿಸಿದರು.

cricket

2024-25ನೇ ಸಾಲಿನ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯ 5054 ಲೆಕ್ಕ ಶೀರ್ಷಿಕೆ — ರಸ್ತೆ ಮತ್ತು ಸೇತುವೆಗಳ ಹೊಸ ಕಾಮಗಾರಿಗಳ ಅಪೆಂಡಿಕ್ಸ್ ಇ ಯೋಜನೆಯಡಿ ಈ ಕಾಮಗಾರಿ ಕೈಗೆತ್ತಲಾಗಿದೆ. ಸುಳ್ಯ-ಪೈಚಾರು-ಸವಣೂರು-ನೆಲ್ಯಾಡಿ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪುತ್ಯೆ ಎಂಬಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಿಫಾರಸ್ಸು ಮಾಡಿದ್ದರು. ಅದರಂತೆ ಅನುದಾನ ಬಿಡುಗಡೆಗೊಂಡಿದ್ದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಶಿಲಾನ್ಯಾಸ ನೆರವೇರಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಅರ್ಚಕ ಶ್ರೀಧರ ನೂಜಿನ್ನಾಯ ಅವರಿಂದ ಪೂಜಾ ವಿಧಿವಿಧಾನ ನಡೆಯಿತು. ನಂತರ ನಡೆದ ಸಭೆಯಲ್ಲಿ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ಪಿಎಲ್‍ಡಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಅನಿಲ, ಗ್ರಾ.ಪಂ. ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು, ಬಿಜೆಪಿ ನೇತಾರರು ಮತ್ತು ಹಲವಾರು ಪ್ರಮುಖರು ಭಾಗವಹಿಸಿದ್ದರು.

ಸ್ಥಳೀಯರ ಹಲವು ವರ್ಷಗಳ ಬೇಡಿಕೆಗೆ ಸ್ಪಂದನೆ ನೀಡಿದ ಈ ರಸ್ತೆ ಅಭಿವೃದ್ಧಿ ಯೋಜನೆಯು ನಾಳೆ ಉತ್ತಮ ಸಂಪರ್ಕ ವ್ಯವಸ್ಥೆಗೆ ದಾರಿ ಮಾಡಿಕೊಡಲಿದೆ ಎಂಬ ನಿರೀಕ್ಷೆಯಿದೆ.

  •  

Leave a Reply

error: Content is protected !!