

ನೆಲ್ಯಾಡಿ : 2025ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇಕಡ 100 ಫಲಿತಾಂಶ ಲಭಿಸಿದೆ. ಈ ವಿಭಾಗದಲ್ಲಿ 65 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 15 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 46 ಮಂದಿ ಪ್ರಥಮ ಶ್ರೇಣಿಯಲ್ಲಿ ಹಾಗೂ 4 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿ 93% ಫಲಿತಾಂಶ ದಾಖಲಿಸಿದೆ. 38 ವಿದ್ಯಾರ್ಥಿಗಳಲ್ಲಿ 3 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 21 ಮಂದಿ ಪ್ರಥಮ ಶ್ರೇಣಿಯಲ್ಲಿ, 10 ಮಂದಿ ದ್ವಿತೀಯ ಶ್ರೇಣಿಯಲ್ಲಿ ಮತ್ತು ಒಬ್ಬ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಈ ಸಾಧನೆಗೆ ಕಾರಣರಾದ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಂಸ್ಥೆಯ ಸಿಬ್ಬಂದಿಗಳನ್ನು ಸಂಸ್ಥೆಯ ಕಾರ್ಯದರ್ಶಿ ರೆ.ಫಾ.ಅನೀಶ್ ಪಾರಾಶೆರಿಲ್, ಸಂಚಾಲಕರಾದ ರೆ.ಫಾ. ನೋಮಿಸ್ ಕುರಿಯಾಕೋಸ್, ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಹಾಗೂ ಪ್ರಾಚಾರ್ಯರಾದ ಏಲಿಯಾಸ್ ಎಂ.ಕೆ ಅವರು ಅಭಿನಂದಿಸಿದ್ದಾರೆ.











