

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಸರ್ಕಾರಿ ಪದವಿ ಕಾಲೇಜುಗಳ ಆಹ್ವಾನಿತ ಲೀಗ್ ಮಾದರಿ ಕಬಡ್ಡಿ ಪಂದ್ಯಾಟವು ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದ್ದು, ಈ ಸ್ಪರ್ಧೆಯಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ ತಂಡ ದ್ವಿತೀಯ ಸ್ಥಾನ ಗಳಿಸಿದೆ.
ತಂಡದ ಪ್ರಮುಖ ಆಟಗಾರನಾಗಿ ಬೆಳ್ಳಾರೆ ಮೂಲದ ಪ್ರಥಮ ಬಿಕಾಂ ವಿದ್ಯಾರ್ಥಿ ಮನೀಷ್ ಅವರು ಉತ್ತಮ ಪ್ರದರ್ಶನ ನೀಡಿ “ಬೆಸ್ಟ್ ಆಲ್ ರೌಂಡರ್” ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಾಲೇಜಿನ ಸಂಯೋಜಕರಾದ ಡಾ.ಸುರೇಶ್ ಅವರ ನೇತೃತ್ವದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ಪಾವನಕೃಷ್ಣ ಅವರ ಮಾರ್ಗದರ್ಶನದಲ್ಲಿ ತರಬೇತಿ ನೀಡಿದ್ದಾರೆ.











