


ನೆಲ್ಯಾಡಿ: ಪುತ್ತೂರಿನ ಅಕ್ಷಯ ಕಾಲೇಜುನಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ ಕೃತ್ವಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜು ವಿದ್ಯಾರ್ಥಿಗಳಾದ ಹರ್ಷಿತ್ ತೃತೀಯ ಬಿ.ಎ ಮತ್ತು ಜಿ. ವಿವೇಕ್ ಬೆಳ್ಯಪ್ಪ ಪ್ರಥಮ ಬಿಕಾಂ ಅವರು ಲಿಟರೇಚರ್ ಕ್ವಿಜ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.
ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಮಾರ್ಗದರ್ಶನದಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಸಂಚಾಲಕಿ ಚಂದ್ರಕಲಾ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಈ ಸ್ಪರ್ಧೆಗೆ ವಿದ್ಯಾರ್ಥಿಗಳನ್ನು ಡಾ. ನೂರಂದಪ್ಪ ತಯಾರಿಗೊಳಿಸಿದ್ದರು.










