ಎಟಿಎಂನಿಂದ ಕಳ್ಳತನಕ್ಕೆ ಯತ್ನ:ಆರೋಪಿ ಬಂಧನ

ಶೇರ್ ಮಾಡಿ

ಬೆಳ್ತಂಗಡಿ: ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೆಂದ್ರವೊಂದಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಮಹಮ್ಮದ್ ರಫೀಕ್ (35) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಕಲ್ಲೇರಿಯಲ್ಲಿನ ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿರುವ ಖಾಸಗಿ ಸಂಸ್ಥೆಯ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳ ಅಲ್ಲಿನ ಸಿಸಿ ಕ್ಯಾಮರಾವನ್ನು ಕಿತ್ತೊಗೆಯಲು ಹಾಗೂ ತೆರೆಯಲು ಯತ್ನಿಸಿ ಹಾನಿಯನ್ನುಂಟು ಮಾಡಿದ್ದ.

ಈ ಬಗ್ಗೆ ಪ್ರಶಾಂತ್ ಡಿ ಕೋಸ್ಟಾ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಿದಾಗ ಪರಿಸರದ ಸಿಸಿ ಕ್ಯಾಮಾರದ ದೃಶ್ಯಾವಳಿಯಲ್ಲಿ ಶಂಕಿತ ಆರೋಪಿಯ ಸುಳಿವು ಪಡೆದುಕೊಂಡರು. ಈ ಸುಳಿವಿನ ಆಧಾರದಲ್ಲಿ ಮೂಲತಃ ಕಾಜೂರಿನ ನಿವಾಸಿಯಾಗಿರುವ,ಕುಪ್ಪೆಟ್ಟಿಯಲ್ಲಿ ವಾಸಿಸುತ್ತಿರುವ ಮಹಮ್ಮದ್ ರಫೀಕ್ ನನ್ನು ವಶಕ್ಕೆ ಪಡೆದಿದ್ದಾರೆ.

Nellyady
  •  

Leave a Reply

error: Content is protected !!