ಕೌಕ್ರಾಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರೈಮಾಸಿಕ ಸಭೆ

ಶೇರ್ ಮಾಡಿ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ) ಕಡಬ ತಾಲೂಕು ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ರವರ ಅಧ್ಯಕ್ಷತೆಯಲ್ಲಿ ಹೊಸಮಜಲು ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಸಭೆಯಲ್ಲಿ ವಲಯ ಮೇಲ್ವಿಚಾರಕರಾದ ಆನಂದ್ ಡಿ.ಬಿ. ಅವರು ಉಪಸ್ಥಿತರಿದ್ದು, ಸದಸ್ಯರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ನೀರಿನ ಸಂರಕ್ಷಣೆಯ ಮಹತ್ವ ಹಾಗೂ ಸೇವಾಕೇಂದ್ರದ ಸೇವೆಗಳ ಕುರಿತು ಕೌಕ್ರಾಡಿ ವಿ ಎಲ್ ಇ ಅಶ್ವಿನಿ ಮಾಹಿತಿ ನೀಡಿದರೆ, ಸೇವಾಪ್ರತಿನಿಧಿ ನಮಿತಾ ಎಸ್. ಶೆಟ್ಟಿಯವರು ಸದಸ್ಯರಿಗೆ ವಿವಿಧ ಮಾಹಿತಿಗಳನ್ನು ನೀಡಿದರು.

ಸಭೆಯಲ್ಲಿ ನೆಲ್ಯಾಡಿ ಒಕ್ಕೂಟದ ಸೇವಾಪ್ರತಿನಿಧಿ ಹೇಮಾವತಿ ಜೆ., ಶೌರ್ಯ ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು, ಒಕ್ಕೂಟದ ಪದಾಧಿಕಾರಿಗಳು, ಉಪಸಮಿತಿ ಮತ್ತು ದಾಖಲೆ ಸಮಿತಿಯ ಸದಸ್ಯರು ಸೇರಿದಂತೆ ಎಲ್ಲಾ ಒಕ್ಕೂಟ ಸದಸ್ಯರು ಭಾಗವಹಿಸಿದ್ದರು.

ಷಣ್ಮುಖ ಪ್ರಗತಿ ಬಂಧು ತಂಡದ ಸದಸ್ಯರು ಸಭೆಯ ಜವಾಬ್ದಾರಿ ನಿರ್ವಹಿಸಿದರು. ಸದಸ್ಯರಾದ ಜನಾರ್ಧನ್ ಸ್ವಾಗತಿಸಿ, ಹರಿಪ್ರಸಾದ್ ವಂದಿಸಿದರು.

Nellyady
  •  

Leave a Reply

error: Content is protected !!