

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹಾಗೂ ವಾಲಿಬಾಲ್ ಆಟಗಾರ ಸೈಯದ್ ಕಾಮಕಾಂಡ ಬಯಲಾಗಿದೆ. ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಆತನ ಮೇಲೆ ಹಲ್ಲೆ ನಡೆಸಿ, ಪೊಲೀಸರು ಕರೆತಂದಿದ್ದಾರೆ.

ಸೈಯದ್‌ನ ಮೊಬೈಲ್ ಪರಿಶೀಲಿಸಿದಾಗ, ಹುಡುಗಿಯರ ಜೊತೆಗಿನ ಅಶ್ಲೀಲ ಸರಸಗಳು ಪತ್ತೆಯಾಗಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಘಟನೆ ಸಂಬಂಧ ಬೆಳ್ತಂಗಡಿ ಪೊಲೀಸರು ಸೈಯದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ, ತನ್ನ ಮೇಲೆ ಹಲ್ಲೆ ನಡೆಸಿದ ಎಂದು ಸೈಯದ್ ಕೂಡ ಬೆಳ್ತಂಗಡಿ ಠಾಣೆಗೆ ದೂರು ಸಲ್ಲಿಸಿದ್ದು, ಈ ಹಿನ್ನಲೆಯಲ್ಲಿ ಹಲ್ಲೆ ನಡೆಸಿದ ಮನೋಜ್ ಮತ್ತು ಪ್ರಜ್ವಲ್ ಗೌಡ ಎಂಬವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.












