ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬೆಳಿಗ್ಗೆ 11:30ಕ್ಕೆ ಪ್ರಕಟಣೆ, ಮಧ್ಯಾಹ್ನ 12:30ಕ್ಕೆ ವೆಬ್‌ಸೈಟ್‌ನಲ್ಲಿ ಲಭ್ಯ

ಶೇರ್ ಮಾಡಿ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ನಿರೀಕ್ಷಿಸುತ್ತಿರುವ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಾಳೆ (ಮೇ 2) ಪ್ರಕಟವಾಗಲಿದೆ. ಬೆಳಿಗ್ಗೆ 11:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಮಧ್ಯಾಹ್ನ 12:30ಕ್ಕೆ ವಿದ್ಯಾರ್ಥಿಗಳು ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ನೋಡಬಹುದಾಗಿದೆ.

ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆದಿದ್ದು, ರಾಜ್ಯಾದ್ಯಂತ ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

  •  

Leave a Reply

error: Content is protected !!