

ನೆಲ್ಯಾಡಿ: ಕಡಬ ತಾಲೂಕಿನ ಪೈಚಾರು, ಸವಣೂರು, ನೆಲ್ಯಾಡಿ, ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಿ.ಮೀ 37.60 ರಿಂದ 37.92ರ “ಪುತ್ಯೆ” ಎಂಬಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಇದರಿಂದಾಗಿ ಮೇ 1ರಿಂದ ಜೂನ್ 15ರವರೆಗೆ, ಸುಮಾರು ಒಂದೂವರೆ ತಿಂಗಳ ಕಾಲ, ಈ ಭಾಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ.
ನೆಲ್ಯಾಡಿ ಪೇಟೆಯಿಂದ ಕೊಕ್ಕಡ ಕಡೆಗೆ ಬರುವ ಹಾಗೂ ಹೋಗುವ ವಾಹನಗಳು ಪರ್ಯಾಯ ಮಾರ್ಗವಾಗಿ ಪಡ್ಡಡ್ಕ – ನೆಲ್ಯಾಡಿ ಮಾರ್ಗದಲ್ಲಿ ಸಂಚರಿಸಲು ಕ್ರಮ ಕೈಗೊಳ್ಳಲಾಗಿದೆ.
ಈ ಸಂಬಂಧ ಸಾರ್ವಜನಿಕರಿಗೆ ಮುಂಚಿತವಾಗಿ ತಿಳಿಸಿ, ಕಾಮಗಾರಿ ನಿರ್ವಹಣೆಗೆ ಸಹಕರಿಸಬೇಕೆಂದು ಲೋಕೋಪಯೋಗಿ ಇಲಾಖೆ ಪುತ್ತೂರು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














