


ಉಪ್ಪಿನಂಗಡಿ: ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದು, ಚಾಲಕ ಜಯಂತ್ ಗೌಡನನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಜಯಂತ್ ಗೌಡ ತನ್ನ ವಾಹನದಲ್ಲಿ ದಾಖಲೆ ಇಲ್ಲದೆ ನಾಲ್ಕು ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಪೊಲೀಸರಿಗೆ ಮಾಹಿತಿ ಲಭಿಸಿತು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದು, ಜಾನುವಾರುಗಳನ್ನು ಬದ್ರುದ್ದೀನ್ ಎಂಬಾತನಿಗೆ ತಲುಪಿಸಲು ಸಾಗಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ.
ಘಟನೆಯ ಸಂಬಂಧ ಜಯಂತ್ ಗೌಡನೊಂದಿಗೆ ಇನ್ನಿಬ್ಬರ ವಿರುದ್ಧವೂ ಕೇಸು ದಾಖಲಾಗಿದೆ.












