

ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಂಗಳೂರು ಮೂಲದ ಪ್ರತಿಷ್ಠಿತ ಕಂಪನಿ Indo-Mim ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗಿತ್ತು.
ಈ ಸಂದರ್ಶನದಲ್ಲಿ ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಫಿಟ್ಟರ್ ಹಾಗೂ ವೆಲ್ಡರ್ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದು, Indo-Mim ಪ್ರತಿನಿಧಿಗಳಾದ ದಯಾನಂದ ಮತ್ತು ವಿಶಾಲ್ ಅವರ ನೇತೃತ್ವದಲ್ಲಿ ಕಾರ್ಯಕ್ರಮವು ಸುಗಮವಾಗಿ ನೆರವೇರಿತು.
ಸಂಸ್ಥೆಯ ಪ್ರಾಂಶುಪಾಲರು ನೀಡಿದ ಮಾಹಿತಿಯಂತೆ, ಈ ಸಂದರ್ಶನದಲ್ಲಿ ಒಟ್ಟು 46 ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಖುಷಿಯ ವಿಷಯವಾಗಿದೆ. ವಿದ್ಯಾರ್ಥಿಗಳಲ್ಲಿ ಉದ್ಯೋಗಾಭಿವೃದ್ಧಿಗೆ ಇದು ಹೊಸ ಬಾಗಿಲು ತೆರೆಯಲಿದೆ ಎಂದು ಅವರು ಹೇಳಿದರು.













