ಗುಂಡ್ಯ ಬಳಿ ಕೆಎಸ್ಆರ್‌ಟಿಸಿ ಬಸ್, ಈಚರ್ ಲಾರಿ ಅಪಘಾತ

ಶೇರ್ ಮಾಡಿ

ಗುಂಡ್ಯ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪ ಮಂಗಳವಾರ ಬೆಳಿಗ್ಗೆ ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಮತ್ತು ಬೆಂಗಳೂರಿನಿಂದ ಉಡುಪಿಗೆ ಜ್ಯೂಸ್ ಸಾಗಿಸುತ್ತಿದ್ದ ಈಚರ್ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ.

ಡಿಕ್ಕಿಯಿಂದಾಗಿ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ವ್ಯಕ್ತಿಗಳಿಗೆ ಗಂಭೀರ ಗಾಯವಾಗಿಲ್ಲ. ಪ್ರಾಣಹಾನಿ ಸಂಭವಿಸದಿದ್ದರೂ, ಪ್ರಯಾಣಿಕರು ಮತ್ತು ವಾಹನ ಚಾಲಕರಿಗೆ ಭಯಾನಕ ಅನುಭವವಾಯಿತು. ಈ ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ತಕ್ಷಣವೇ ಸ್ಥಳೀಯರು ಹಾಗೂ ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.

ಆಶ್ಚರ್ಯಕರ ವಿಷಯವೆಂದರೆ, ಇದೇ ಸ್ಥಳದಲ್ಲಿ ಕೇವಲ ಎರಡು ದಿನಗಳ ಹಿಂದೆ ಭಾನುವಾರದಂದು ಮತ್ತೊಂದು ಅಪಘಾತ ಸಂಭವಿಸಿತ್ತು. ಆ ಅಪಘಾತದಲ್ಲಿ ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿಗಳ ನಡುವೆ ಡಿಕ್ಕಿಯಾಗಿ ನಾಲ್ಕು ಮಂದಿ ಗಾಯಗೊಂಡಿದ್ದರು. ಇದರಿಂದ ಎರಡು ಗಂಟೆಗಳ ಕಾಲ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು.

ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಕೆಎಸ್ಆರ್‌ಟಿಸಿ ಬಸ್ಸುಗಳು ಹೆಚ್ಚು ಅಪಘಾತ ಸಂಭವಿಸುತ್ತದೆ. ಹೆಚ್ಚಿನ ಕೆಎಸ್ಆರ್‌ಟಿಸಿ ಬಸ್ಸುಗಳಲ್ಲಿ ಚಾಲಕರು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡವರಾಗಿರುವುದರಿಂದ, ಅವರು ಮಾಪದಂಡಗಳನ್ನು ಪಾಲಿಸದೆ ನಿರ್ಲಕ್ಷತೆಯಿಂದ ಚಾಲನೆ ಮಾಡುವ ಸಂದರ್ಭಗಳು ಹೆಚ್ಚಾಗಿದೆ. ಇದು ಅಪಘಾತಗಳ ಹೆಚ್ಚಳಕ್ಕೆ ಕಾರಣವಾಗಿದೆ, ಮಳೆಗಾಲ ಆರಂಭಗೊಂಡಿವೆ ಸಂಬಂಧಪಟ್ಟ ಅಧಿಕಾರಿಗಳು ವಾಹನ ಸಂಚಾರ ವ್ಯವಸ್ಥೆ ಹಾಗೂ ಚಾಲಕರ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮಗಳು ಜಾರಿಯಾಗದೇ ಹೋದರೆ, ಈ ರೀತಿಯ ದುರ್ಘಟನೆಗಳು ಮುಂದೆಯೂ ಸಂಭವಿಸುವ ಸಾಧ್ಯತೆ ಇದೆ ಎಂದು ಸಾರ್ವಜನಿಕರ ಆಕೋಶವನ್ನು ಹೊರಹಾಕಿದ್ದಾರೆ.

  •  

Leave a Reply

error: Content is protected !!