

ಕೊಕ್ಕಡ: ಶಿಬಾಜೆ ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಮೇ 20ರಿಂದ 25ರವರೆಗೆ ನಡೆಯುವ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಇಂದು ಭಾವಪೂರ್ಣವಾಗಿ ಚಾಲನೆ ದೊರಕಿತು. ಶಿಬಿರದ ಉದ್ಘಾಟನಾ ಸಮಾರಂಭವು ಸಾಂಪ್ರದಾಯಿಕ ರೀತಿಯಲ್ಲಿ ದೀಪ ಬೆಳಗಿಸುವ ಮೂಲಕ ನಡೆಯಿತು. ಈ ಮಹತ್ವದ ಕಾರ್ಯವನ್ನು ಶಿಬಿರಾರ್ಥಿ ಪ್ರತೀಕ್ ರವರು ನೆರವೇರಿಸಿದರು.
ಶಿಬಿರದ ಸಂದರ್ಭದಲ್ಲಿ ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ವಿಶಾಲಾಕ್ಷಿ ಯವರು ಶಿಬಿರಾರ್ಥಿಗಳಿಗೆ ಶುಭ ಹಾರೈಸುತ್ತಾ, ಈ ಶಿಬಿರವು ಮಕ್ಕಳ ಸಾಮರ್ಥ್ಯ ಅಭಿವೃದ್ದಿಗೆ ಪೂರಕವಾಗಲಿ ಎಂಬ ಆಶಯ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವಲ್ಲಿ ಪಂಚಾಯತ್ ಸಿಬ್ಬಂದಿ ವರ್ಗದವರು ಸಂಪೂರ್ಣ ಸಹಕಾರ ನೀಡಿದ್ದು, ಶಿಬಿರದ ಯಶಸ್ಸಿಗೆ ತಮ್ಮ ಕೊಡುಗೆ ನೀಡಿದ್ದಾರೆ.
ಬೇಸಿಗೆ ರಜೆಯ ಸಮಯದಲ್ಲಿ ಮಕ್ಕಳಿಗೆ ಜ್ಞಾನ ಮತ್ತು ಮನೋರಂಜನೆಯ ಸಮ್ಮಿಲನ ನೀಡುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಶಿಬಿರವು, ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳ ಮನಸ್ಸನ್ನು ಸದೃಢಗೊಳಿಸಲು ಶ್ರಮಿಸುತ್ತಿದೆ.













