ಧರ್ಮಸ್ಥಳ: ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ

ಶೇರ್ ಮಾಡಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮತ್ತು ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಆಶ್ರಯದಲ್ಲಿ “ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ” ಕಾರ್ಯಕ್ರಮವು ಮೇ.20 ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು.

ಧರ್ಮಸ್ಥಳದ ಧರ್ಮಾಧಿಕಾರಿಯಾದ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು. ಭಾವೈಕ್ಯತಾ ಮಹಾಸಂಸ್ಥಾನ ಪೀಠ ಶಿರಹಟ್ಟಿ, ಬಾಳೆಹೊಸುರಿನ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.

ಕ್ಷೇಮವನ ಬೆಂಗಳೂರಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಹೇಮಾವತಿ ವೀ.ಹೆಗ್ಗಡೆಯವರು ವಾರ್ಷಿಕ ವರದಿ ಬಿಡುಗಡೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್‌ ಕುಮಾ‌ರ್ ಎಸ್‌. ಎಸ್., ದ.ಕ. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಪುನರ್ಜನ್ಮ ಆಳ್ವಾಸ್‌ ವ್ಯಸನಮುಕ್ತಿ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ವಿನಯ ಆಳ್ವ ಉಪಸ್ಥಿತರಿದ್ದರು.

ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಅನಿಲ್‌ ಕುಮಾ‌ರ್ ಆಶಯ ನುಡಿಗಳಾನ್ನಾಡಿದರು. ಶಂಕರಪ್ಪ ರಾಮದುರ್ಗ, ಶಶಿಕಲಾ ರಾಜು ಉಡುಪಿ, ಅಂಕಿತ ಶಿವಾನಂದ ಪಟ್ಟಣ ಶೆಟ್ಟಿ ಅನಿಸಿಕೆ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.

  •  

Leave a Reply

error: Content is protected !!