ಶಿರಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

ಶೇರ್ ಮಾಡಿ

ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಬುಧವಾರ ಸಂಜೆ ನಡೆದಿದೆ.

ಗಾಯಗೊಂಡ ಚಾಲಕನನ್ನು ಉತ್ತರಪ್ರದೇಶದ ನಿವಾಸಿ ರಾಕೇಶ್ ಯಾದವ್(45) ಎಂದು ಗುರುತಿಸಲಾಗಿದೆ. ಮಂಗಳೂರುದಿಂದ ಬೆಂಗಳೂರು ಕಡೆಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್, ಕೊಡ್ಯಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿಯಾಗಿದೆ. ಪರಿಣಾಮವಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸದ್ಯಕ್ಕೆ ಟ್ಯಾಂಕರ್ ನಿಂದ ಯಾವುದೇ ಅನಿಲ ಸೋರಿಕೆ ಸಂಭವಿಸಿಲ್ಲ. ಆದರೆ ಸುರಕ್ಷತೆ ದೃಷ್ಟಿಯಿಂದ ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಅವಶ್ಯಕಕ್ರಮ ಕೈಗೊಂಡಿದ್ದಾರೆ.

  •  

Leave a Reply

error: Content is protected !!