ಇಚಿಲಂಪಾಡಿಯಲ್ಲಿ ಹೊಸ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಶೇರ್ ಮಾಡಿ

ನೆಲ್ಯಾಡಿ: ಇಚಿಲಂಪಾಡಿ ಗ್ರಾಮದ ಕುಡಾಲದಿಂದ ಅರಿಮಜಲು ಕಡೆಗೆ ತೆರಳುವ ರಸ್ತೆಯ ಅಭಿವೃದ್ಧಿಗೆ 2023–24ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಮಂಜೂರಾದ ರೂ.5 ಲಕ್ಷ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಶನಿವಾರದಂದು ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ತೆಂಗಿನಕಾಯಿ ಒಡೆದು ರಸ್ತೆ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, “ಸಾರ್ವಜನಿಕರ ಆರೋಗ್ಯಕರ ಹಾಗೂ ಸುರಕ್ಷಿತ ಸಂಚಾರದ ದೃಷ್ಟಿಯಿಂದ ಈ ರಸ್ತೆಯನ್ನು ನಿರ್ಮಿಸಲಾಗಿದೆ. ಈ ರಸ್ತೆ ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಸಂಚಾರಕ್ಕೆ ಅನುಕೂಲವಾಗಲಿ ಎಂಬ ಆಶಯವಿದೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಇಚಿಲಂಪಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ದಿವ್ಯೇಶ ಕಲ್ಯ, ಗುತ್ತಿಗೆದಾರ ವಿನೋದ್, ಸಂದೇಶ್ ಹಾಗೂ ರಸ್ತೆ ಬಳಕೆದಾರರು ಉಪಸ್ಥಿತರಿದ್ದರು. ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚಿಲಂಪಾಡಿ ಸ್ವಾಗತಿಸಿ ವಂದಿಸಿದರು.

  •  

Leave a Reply

error: Content is protected !!