

ಕರಾವಳಿಯಲ್ಲಿ ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮೇ 30 ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಕಾಲ 71.1 ಮೀಟರ್ ಮಳೆಯ ದಾಖಲೆ ಇದೆ ಮತ್ತು ಮುಂದಿನ ನಾಲ್ಕು ದಿನಗಳ ಕಾಲ ಮಳೆಯ ನಿರೀಕ್ಷೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ, ಮತ್ತು ಪ್ರವಾಸಿಯರಿಗೆ ನದಿತೀರ ಮತ್ತು ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಶುಕ್ರವಾರ ವರ್ಷದ ಶಾಲಾರಂಭವಾಗಿದ್ದು, ವಿದ್ಯಾರ್ಥಿಗಳು ಶಾಲೆಗೆ ತೆರಳಲು ಸಿದ್ಧತೆ ನಡೆಸಿದ್ದು, ಪ್ರಥಮ ದಿನವೇ ಶಾಲೆಗಳಿಗೆ ರಜೆ ಸಿಕ್ಕಿದಂತಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ಹೀಗಿದೆ:
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
- ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 30.05.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.
- ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
- ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
- ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
- ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
- ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
- ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವುದು.
8) ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.
ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ
24*7 ໐ – 1077 /0824 2442590













