

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ನಾಳೆ (ಮೇ 31 ಶನಿವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಅವಘಡಗಳು ಸಂಭವಿಸುತ್ತಿದ್ದು ಸಾರ್ವಜನಿಕರು ಎಚ್ಚರ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೇ 30 ರಿಂದ ಜೂನ್ 3ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 31 ರಿಂದ ಜೂನ್ 3ರ ವರೆಗೆ ಕರಾವಳಿ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರಿನಲ್ಲಿ 26 ಸೆಂ.ಮೀ ಮಳೆ ಶುಕ್ರವಾರ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದ್ದು ಮಂಗಳೂರಿನಲ್ಲಿ 26 ಹಾಗೂ ಮೂಲ್ಕಿಯಲ್ಲಿ 19 ಸೆಂ.ಮೀ ಮಳೆಯಾಗಿದೆ.













