

ಉಡುಪಿ: ಧಾರಾಕಾರ ಮಳೆಯ ಪರಿಣಾಮ ಆಗುಂಬೆ ಘಾಟಿಯಲ್ಲಿ ಕಾರೊಂದು ಪಲ್ಟಿಯಾಗಿದೆ. ಆಗುಂಬೆಯಿಂದ ಉಡುಪಿ ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಧಾರಾಕಾರ ಮಳೆಯಿಂದಾಗಿ 6ನೇ ತಿರುವಿನಲ್ಲಿ ಕಾರು ಉರುಳಿ ಬಿದ್ದಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ.
ಕಾರಿನಲ್ಲಿ ಸಿಲುಕಿಕೊಂಡಿದ್ದ ತಾಯಿ ಹಾಗೂ ಮಗುವನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತವಾಗಿದೆ.
ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.













