

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ), ಕಡಬ ತಾಲೂಕು ನೆಲ್ಯಾಡಿ ವಲಯದ ಪುತ್ತಿಗೆ ಕಾರ್ಯಕ್ಷೇತ್ರ ವ್ಯಾಪ್ತಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಕಿರಿಯ ಪ್ರಾಥಮಿಕ ಶಾಲೆ, ಪುತ್ತಿಗೆ ಇವರಿಂದ 2025–26ನೇ ಸಾಲಿನ “ಜ್ಞಾನ ದೀಪ” ಕಾರ್ಯಕ್ರಮದಡಿಯಲ್ಲಿ ಶುದ್ಧ ನೀರಿನ ಪೀಲ್ಟರ್ ಅಳವಡಿಕೆಗಾಗಿ ಬೇಡಿಕೆ ಮನವಿ ಸಲ್ಲಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರದ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ರೂ. 20,000/- ಮೊತ್ತದ ಅನುದಾನವನ್ನು ಮಂಜೂರು ಮಾಡಲಾಗಿದೆ. ಈ ಮಂಜೂರಾತಿ ಪತ್ರವನ್ನು ಯೋಜನಾಧಿಕಾರಿಗಳಾದ ಪ್ರಕಾಶ್ ಕುಮಾರ್ ರವರು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸೂರಪ್ಪ ಗೌಡ ಹಾಗೂ ಸದಸ್ಯರ ಉಪಸ್ಥಿತಿಯಲ್ಲಿ ಶಾಲೆಗೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಮಧೂಸೂದನ್ ಕೆ.ಎ., ಶಿಕ್ಷಕ ವೃಂದ, ಮೇಲ್ವಿಚಾರಕರಾದ ಆನಂದ ಡಿ.ಬಿ., ಜ್ಞಾನ ವಿಕಾಸ ಸಮನ್ವಯಾಧಿಕಾರಿ ಚೇತನ, ಸೇವಾ ಪ್ರತಿನಿಧಿಯಾದ ಪ್ರಿಯಲತಾ, ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಶಾಲೆಯ ಮುಖ್ಯಶಿಕ್ಷಕ ಮಧೂಸೂದನ್ ಕೆ.ಎ. ಎಲ್ಲರಿಗೂ ಧನ್ಯವಾದ ಅರ್ಪಿಸಿದರು.













