

ಬೆಳ್ತಂಗಡಿ:ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ(67 ) ಜೂ.7ರಂದು ಮಂಗಳೂರಿನ ಕಾವೂರು ಸಮೀಪ ಇರುವ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.
ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು. ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು, -ಕನ್ನಡ ಪ್ರಸಂಗ ಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ನಿರ್ವಹಿಸಿದ್ದರು. ಪುಂಡು ವೇಷ, ರಾಜ ವೇಷ, ನಾಟಕೀಯ ಪಾತ್ರಗಳ ನುರಿತ ಕಲಾವಿದರಾಗಿದ್ದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.













