ಆದಿ ಸುಬ್ರಹ್ಮಣ್ಯದಲ್ಲಿ ಕೊಠಡಿ ಬಾಡಿಗೆ ಪಡೆಯುವ ವಿಚಾರ; ಯುವಕನ ಮೇಲೆ ಹಲ್ಲೆ

ಶೇರ್ ಮಾಡಿ

ಸುಬ್ರಹ್ಮಣ್ಯ: ಕೊಠಡಿ ಬಾಡಿಗೆ ಪಡೆಯುವ ವಿಚಾರಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ಆದಿ ಸುಬ್ರಹ್ಮಣ್ಯ ಪ್ರದೇಶದಲ್ಲಿ ಯುವಕನೋರ್ವನ ಮೇಲೆ ಹಲ್ಲೆ ನಡೆಸಲಾಗಿದ್ದು ಕೃತ್ಯ ವಿಡಿಯೋ ವೈರಲ್ ಆಗಿದೆ.

ಯುವಕನೋರ್ವ ಕೊಠಡಿಯನ್ನು ವೀಕ್ಷಿಸಿದ ಬಳಿಕ ಅದನ್ನು ಪಡೆಯದೆ ತೆರಳಿದ ಕಾರಣಕ್ಕೆ ಕೊಠಡಿಯನ್ನು ನಿರ್ವಹಿಸುವ ತಂಡ ವಾಗ್ವಾದಕ್ಕಿಳಿಯಿತು ಬಳಿಕ ಯುವಕನ ಮೇಲೆ ತಂಡದ ಓರ್ವ ಸದಸ್ಯ ಹಲ್ಲೆ ನಡೆಸಿದನು.

ಸುಬ್ರಹ್ಮಣ್ಯದಲ್ಲಿ ಕೆಲವೆಡೆ ಹೊರಗಿನವರು ರೂಮ್ ಗಳನ್ನು ಲೀಸ್ ಗೆ ಪಡೆದುಕೊಂಡು ಯಾತ್ರಿಕರಿಗೆ ಪೂರೈಸುವ ಕೆಲಸ ಮಾಡುತ್ತಿದ್ದು ಅವರು ಈ ಕೃತ್ಯ ಎಸಗಿರಬೇಕು ಎಂದು ಸ್ಥಳೀಯರು ಶಂಕಿಸಿದ್ದಾರೆ.

ಹಾಡು ಹಗಲೆ ನಡು ರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ತಂಡದ ಮೇಲೆ ಸೂಕ್ತ ಕೈಗೊಳ್ಳಬೇಕೆಂದು ಸ್ಥಳೀಯರಿಂದ ಆಗ್ರಹ ವ್ಯಕ್ತವಾಗಿದ್ದು ಇಂಥ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ.

  •  

Leave a Reply

error: Content is protected !!