



ಅರಸಿನಮಕ್ಕಿ: ಕನ್ಯಾಡಿ ಸೇವಾಭಾರತಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ, ಅರಸಿನಮಕ್ಕಿ ಗ್ರಾಮ ಪಂಚಾಯತ್, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ತುಂಬೆತ್ತಡ್ಕ ರಾಣೆಯರ್ ಸಭಾಭವನದಲ್ಲಿ ನಡೆಯಿತು.
ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಈ ಉಚಿತ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಲಿ ಎಂದು ಶುಭಹಾರೈಸಿದರು.
ಸೇವಾಭಾರತಿ ಕನ್ಯಾಡಿಯ ಅಧ್ಯಕ್ಕೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ಸಿಇಒ ಸ್ವರ್ಣಗೌರಿ ಮಾತನಾಡಿ, ಟೈಲರಿಂಗ್ ಕಲಿಕೆ ಅನೇಕ ಉದ್ಯೋಗದ ಅವಕಾಶಗಳನ್ನು ಒದಗಿಸಬಲ್ಲದು. ಸ್ವ ಉದ್ಯೋಗವನ್ನು ಕಲಿತರೆ ನಮ್ಮ ಜೀವನವನ್ನು ನಾವೇ ರೂಪಿಸಿಕೊಂಡು ಸಮಾಜದಲ್ಲಿ ಬೆಳಗಬಹುದು ಎಂದರು.
ಸಮಾರಂಭದಲ್ಲಿ ತುಂಬೆತ್ತಡ್ಕ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶ್ರೀಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ಸುರೇಶ್ ವಿ, ಅರಸಿನಮಕ್ಕಿ, ಗ್ರಾ.ಪಂ ಉಪಾಧ್ಯಕ್ಷ ಸುಧೀರ್ ಎಂ ಎಸ್, ಸೇವಾಧಾಮ ಸಂಸ್ಥಾಪಕ ಕೆ.ವಿನಾಯಕ ರಾವ್, ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ್ಕಿ ಬೇಬಿ, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಖಜಾಂಚಿ ಬಬಿತಾ, ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ ನೀತಾ ರಾಧೇಶ್ ಆಚಾರ್ಯ, ಟೈಲರಿಂಗ್ ತರಬೇತುದಾರರಾದ ಪ್ರತಿಮಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಬಿರದಲ್ಲಿ ಒಟ್ಟು 40 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದು, ಸುನಂದಾ ಸ್ವಾಗತಿಸಿದರು, ಸೇವಾಭಾರತಿಯ ಡಾಕ್ಯುಮೆಂಟೇಶನ್, ಮೋನಿಟರಿಂಗ್ ಮತ್ತು ಇವ್ಯಲ್ಯೂಯೇಷನ್ ಕೋ – ಆರ್ಡಿನೇಟರ್ ಸುಮ ನಿರೂಪಿಸಿದರು. ಆಶಾ ವಂದಿಸಿದರು.







