ಜೂನ್ 22ರಂದು ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ದೇವಸ್ಥಾನದಲ್ಲಿ ಕುಣಿತ ಭಜನಾ ಸಮಾರೋಪ

ಶೇರ್ ಮಾಡಿ

ನೆಲ್ಯಾಡಿ: ಕೌಕ್ರಾಡಿ – ಪಟ್ಲಡ್ಕ ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೇವಸ್ಥಾನ ಪಟ್ಲಡ್ಕ-ಕೌಕ್ರಾಡಿ ಮತ್ತು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಡಬ ತಾಲ್ಲೂಕು ಇದರ ಆಶ್ರಯದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಆಶೀರ್ವಾದದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಕಡಬ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಟ್ಟೆಮಜಲು ಮತ್ತು ಶ್ರೀ ಕ್ಷೇತ್ರ ಪಟ್ಲಡ್ಕದ ಅಭಿವೃದ್ಧಿ ಸಮಿತಿಯ ಸಹಭಾಗಿತ್ವದಲ್ಲಿ ಆಯೋಜಿಸಿರುವ “ಶ್ರೀ ಚಾಮುಂಡೇಶ್ವರಿ ಮಕ್ಕಳ ಹಾಗೂ ಮಹಿಳಾ ಕುಣಿತ ಭಜನಾ ತರಬೇತಿ ಕಾರ್ಯಕ್ರಮದ ಸಮಾರೋಪ ಹಾಗೂ ಆಹ್ವಾನಿತ ತಂಡಗಳಿಂದ ಕುಣಿತ ಭಜನಾ ಸಾಂಸ್ಕೃತಿಕ ವೈಭವ” ಜೂನ್ 22ರಂದು ಸಂಜೆ ನಡೆಯಲಿದೆ.

ಸಭಾ ಕಾರ್ಯಕ್ರಮದ ಗೌರವಾಧ್ಯಕ್ಷತೆಯನ್ನು ಪಟ್ಲಡ್ಕ ಶ್ರೀ ಕ್ಷೇತ್ರ ಆಡಳಿತ ಮಂಡಳಿ ಅಧ್ಯಕ್ಷ ತುಕ್ರಪ್ಪ ಶೆಟ್ಟಿ ನೂಜೆ, ಅಧ್ಯಕ್ಷತೆಯನ್ನು ಪಟ್ಲಡ್ಕ ಮಕ್ಕಳ ಹಾಗೂ ಮಹಿಳಾ ಭಜನಾ ತರಬೇತಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್.ಪಿ.ಪಟ್ಲಡ್ಕ, ಕಾರ್ಯಕ್ರಮದ ಉದ್ಘಾಟನೆಯನ್ನು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಕುಣಿತ ಭಜನೆಯ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಲ್ಯಾಡಿ ವಲಯ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ಧಾರ್ಮಿಕ ಉಪನ್ಯಾಸವನ್ನು ಮರ್ದಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯದರ್ಶಿ ಸತ್ಯನಾರಾಯಣ ಹೆಗ್ಡೆ ನಡುಮಜಲು, ಮುಖ್ಯ ಅತಿಥಿಗಳಾಗಿ ಕೌಕ್ರಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷ ಉದಯ್ ಕುಮಾರ್ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಬಾಬು ನಾಯ್ಕ, ಕಡಬ ತಾಲ್ಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷ ಸುಂದರ ಗೌಡ ಒಗ್ಗು, ಧರ್ಮಸ್ಥಳ ಕರ್ನಾಟಕ ರಾಜ್ಯ ಭಜನಾ ಪರಿಷತ್ ಕಾರ್ಯದರ್ಶಿ ಸುಬ್ರಹ್ಮಣ್ಯ ಪ್ರಸಾದ್, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ನೆಲ್ಯಾಡಿ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯಾಧ್ಯಕ್ಷ ಕುಶಾಲಪ್ಪ ಗೌಡ ಪಿ.ಎನ್, ಕಟ್ಟೆಮಜಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ಅಧ್ಯಕ್ಷ ಮಾರ್ಷಲ್ ಡಿಸೋಜಾ, ಪಟ್ಲಡ್ಕ ಶ್ರೀ ಚಾಮುಂಡೇಶ್ವರಿ ಮಕ್ಕಳ ಹಾಗೂ ಮಹಿಳಾ ಕುಣಿತ ಭಜನಾ ಮಂಡಳಿ ಅಧ್ಯಕ್ಷೆ ಗೀತಾ ನೇಲ್ಯಡ್ಕ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಆಹ್ವಾನಿತ ತಂಡಗಳಿಂದ ಭಕ್ತಿಪೂರ್ಣ ಕುಣಿತ ಭಜನೆ ಪ್ರದರ್ಶನ ನಡೆಯಲಿದ್ದು, ಭಕ್ತರನ್ನು ಹಾಗೂ ಸಾರ್ವಜನಿಕರನ್ನು ಭಾಗವಹಿಸುವಂತೆ ಸಂಘಟಕರು ಆಹ್ವಾನಿಸಿದ್ದಾರೆ.

  •  

Leave a Reply

error: Content is protected !!