ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ

ಶೇರ್ ಮಾಡಿ

ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ.

ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು.

ಮೃತದೇಹ ಮಲ್ಲೇಶ್ವರಂ ನಿವಾಸದಲ್ಲಿದ್ದು ಪೊಲೀಸರು ಭದ್ರತೆ ವ್ಯವಸ್ಥೆ ಮಾಡುತ್ತಿದ್ದಾರೆ. ಹಲವು ಗಣ್ಯರು ಈಗ ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು.

  •  

Leave a Reply

error: Content is protected !!