

ಕಳಪ್ಪಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ) ಕಡಬ ತಾಲೂಕು, ನೆಲ್ಯಾಡಿ ವಲಯದ ಕಳಪ್ಪಾರು ಒಕ್ಕೂಟದ ಆಶ್ರಯದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟ ಕಾರ್ಯಕ್ರಮವು ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕಳಪ್ಪಾರಿನಲ್ಲಿ ವಿಜೃಂಭಣೆಯಿಂದ ನಡೆಯಿತು.
ಈ ಕಾರ್ಯಕ್ರಮದಲ್ಲಿ ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ. ಅವರು ಭಾಗವಹಿಸಿ ಪರಿಸರದ ಮಹತ್ವ, ಅದರ ರಕ್ಷಣೆ ಹಾಗೂ ಗಿಡಗಳ ಪೋಷಣೆಯ ಕುರಿತು ವಿದ್ಯಾರ್ಥಿಗಳು ಮತ್ತು ಊರ ಜನರಿಗೆ ಮಾಹಿತಿ ನೀಡಿದರು.
ಕಳಪ್ಪಾರು ಒಕ್ಕೂಟದ ಅಧ್ಯಕ್ಷರು ಹಾಗೂ ನೆಲ್ಯಾಡಿ ವಲಯದ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಎಸ್.ಡಿ.ಎಂ.ಸಿ. ಅಧ್ಯಕ್ಷ ಲೋಕೇಶ್ ಬಾಗಿಲಗದ್ದೆ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.










