ಕೌಕ್ರಾಡಿ: ತೋಟದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿ ಸಾವು

ಶೇರ್ ಮಾಡಿ

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಸಮೀಪದ ಎಡ್ತಿಲ್ಲ ಎಂಬಲ್ಲಿ ಮಂಗಳವಾರದಂದು ಮಧ್ಯಾಹ್ನ ತೋಟದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ.

ಮೃತ ವ್ಯಕ್ತಿಯನ್ನು ನೆಲ್ಯಾಡಿ ಸಮೀಪದ ಬರೆಗುಡ್ಡೆ ನಿವಾಸಿಯಾದ ವಿಜೇಶ್ ಎ(43) ಎಂದು ಗುರುತಿಸಲಾಗಿದೆ. ಪ್ರತಿ ದಿನದಂತೆ ಮಂಗಳವಾರದಂದು ಬೆಳಿಗ್ಗೆ ತಮ್ಮ ಎಡ್ತಿಲ್ಲ ಮಣ್ಣಗುಂಡಿಯ ತೋಟಕ್ಕೆ ತೆರಳಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ತೋಟದಲ್ಲಿ ಕೆಲಸ ಮಾಡುವ ವೇಳೆ ಅಚಾನಕ್ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು, ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮೃತರ ತಾಯಿ ನಿವೃತ್ತ ಮುಖ್ಯ ಶಿಕ್ಷಕಿ ಅನ್ನಮ್ಮ , ಸಹೋದರ ವಿನೋದ್ ಪೊಲೀಸ್ ಇಲಾಖೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ನಿ ಹಾಗೂ ಮಕ್ಕಳು ಇದ್ದಾರೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  •  

Leave a Reply

error: Content is protected !!