

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಕುಂಡಡ್ಕ ನಿವಾಸಿ ಚಂದ್ರಹಾಸ ಶೆಟ್ಟಿ ಕೆ.(56) ಇಂದು (ಜುಲೈ 23) ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ಆರಂಭದಲ್ಲಿ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಹಾಗೂ ಅಲ್ಲಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.
ಅತ್ಯಂತ ಸರಳ, ಸ್ನೇಹಪರ ಸ್ವಭಾವದ ಚಂದ್ರಹಾಸ ಶೆಟ್ಟಿ, ನೆಲ್ಯಾಡಿ ಮತ್ತು ಸುತ್ತಮುತ್ತಲ ಗ್ರಾಮೀಣ ಜನತೆಗೆ ಚೆನ್ನಾಗಿ ಪರಿಚಿತರಾಗಿದ್ದರು. ಹಲವು ವರ್ಷಗಳಿಂದ ಸ್ವಂತ ಪಿಕಪ್ ವಾಹನದಲ್ಲಿ ಬಾಡಿಗೆ ಸೇವೆ ಸಲ್ಲಿಸುತ್ತಿದ್ದು.
ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ. ಚಂದ್ರಹಾಸ ಶೆಟ್ಟಿ ಅವರ ಹಿರಿಯ ಸಹೋದರ ಲಕ್ಷ್ಮೀನಾರಾಯಣ ಶೆಟ್ಟಿ ಪ್ರಸಿದ್ಧ ಯಕ್ಷಗಾನ ಭಾಗವತರಾಗಿದ್ದು, ಇನ್ನೋರ್ವ ಸಹೋದರ ವಿಶ್ವನಾಥ ಶೆಟ್ಟಿ ನೆಲ್ಯಾಡಿ ಸಂತ ಚಾರ್ಜ್ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.










