

ಕೊಕ್ಕಡ: ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕೊಕ್ಕಡ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಸೋಮವಾರ ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಜರುಗಿತು.
ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಕುಶಾಲಪ್ಪ, ಉಪಾಧ್ಯಕ್ಷರಾಗಿ ವಿಶ್ವನಾಥ, ಪ್ರಧಾನ ಕಾರ್ಯದರ್ಶಿಯಾಗಿ ಶಾಮಲಾ.ಎಸ್ ಹಾಗೂ ಕೋಶಾಧಿಕಾರಿಯಾಗಿ ನಾರಾಯಣ ನಾಯ್ಕ್ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಕಾರ್ಯದರ್ಶಿ ನಾಗೇಶ್ ಕುಮಾರ್, ಕೊಕ್ಕಡ ವಲಯದ ನಿಕಟಪೂರ್ವ ಪದಾಧಿಕಾರಿ ಪ್ರಶಾಂತ್ ಕೆ. ಸೇರಿದಂತೆ ಸಂಘದ ಹಲವಾರು ಸದಸ್ಯರು ಉಪಸ್ಥಿತರಿದ್ದರು.










