ಖಾಸಗಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ಕಾಂಪೌಂಡ್‌ಗೆ ಡಿಕ್ಕಿ : 8 ಮಂದಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

ಶೇರ್ ಮಾಡಿ

ವಿಟ್ಲ: ಖಾಸಗಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ನೇರವಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ಶನಿವಾರ ಸಂಜೆ ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿ ಸಂಭವಿಸಿದೆ.

ಕನ್ಯಾನ – ಆನೆಕಲ್ಲು – ಮುಡಿಪು ಮಾರ್ಗವಾಗಿ ಹೋಗುತ್ತಿದ್ದ ಬಸ್‌ವೊಂದು ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಹೊರಟು ಕೆಲವೇ ದೂರದಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ನೇರವಾಗಿ ಮೆಸ್ಕಾಂ ಕಚೇರಿಯ ಮುಂಭಾಗದ ಕಾಂಪೌಂಡ್‌ಗೆ ಗುದ್ದಿದೆ.

ಅಂದಾಜು 20–30 ಪ್ರಯಾಣಿಕರಿದ್ದ ಬಸ್ಸಿನಲ್ಲಿ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಪರಿಣಾಮವಾಗಿ ಕಾಂಪೌಂಡ್ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಬಸ್‌ನ ಮುಂಭಾಗ ಜಖಂಗೊಂಡಿದೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣಾಧಿಕಾರಿ ಸಿಬ್ಬಂದಿಗಳೊಂದಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

  •  

Leave a Reply

error: Content is protected !!