ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್‌,ಕಾರು ಡಿಕ್ಕಿ-ಕಾರು ಚಾಲಕನಿಗೆ ಗಂಭೀರ ಗಾಯ

ಶೇರ್ ಮಾಡಿ

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿ ಮಂಗಳವಾರದಂದು ಸಂಜೆ ನಡೆದಿದೆ.

ಗಾಯಗೊಂಡವರನ್ನು ಕಾರು ಚಾಲಕ ವಿಟ್ಲಮೂಲದ ಸಾದಿಕ್(36) ಎಂದು ಗುರುತಿಸಲಾಗಿದೆ.

ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರಿನಿಂದ ವಿಟ್ಲಕ್ಕೆ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ. ಗಾಯಗೊಂಡ ಕಾರು ಚಾಲಕನನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಪಘಾತದಲ್ಲಿ ಎರಡು ವಾಹನಗಳು ಜಖಂಗೊಂಡಿವೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚತುಷ್ಪದ ಕಾಮಗಾರಿ ಈ ಪ್ರದೇಶದಲ್ಲಿ ನಡೆಯುತ್ತಿದ್ದು ಕಾಮಗಾರಿ ಅವೈಜ್ಞಾನಿಕವಾಗಿದೆ ಸುಮಾರು 90% ನಷ್ಟು ಹೆದ್ದಾರಿ ತಿರುವಿನಿಂದ ಕೂಡಿದ್ದು. ಹೆದ್ದಾರಿ ಕಾಮಗಾರಿ ನಡೆಯುವ ವೇಳೆ ಯಾವುದೇ ಸೂಚನಾ ಫಲಕವನ್ನು ಹಾಕದೆ ಏಕಮುಖವಾಹನ ಸಂಚಾರಕ್ಕೆ ಅವಕಾಶವನ್ನು ನೀಡಿರುವುದೇ ಈ ಅಪಘಾತಕ್ಕೆ ಮುಖ್ಯ ಕಾರಣವಾಗಿದೆ. ಈ ಪ್ರದೇಶದಲ್ಲಿ ಆಗಾಗ ಅಪಘಾತಗಳು ನಡೆಯುತ್ತಲೇ ಇದೆ. ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಇಲಾಖೆ ವಿರುದ್ಧ ಆಕ್ರೋಶವನ್ನು ಹಲವು ಬಾರಿ ವ್ಯಕ್ತಪಡಿಸಿದ್ದರು ಯಾವುದೇ ಪ್ರಯೋಜನವಾಗಲಿಲ್ಲವೆಂದು ಸ್ಥಳೀಯ ಸಾರ್ವಜನಿಕರು ಮಾಧ್ಯಮಕ್ಕೆ ತಿಳಿಸಿದರು.

  •  

Leave a Reply

error: Content is protected !!