

ನೆಲ್ಯಾಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ ತಾಲೂಕಿನ ನೆಲ್ಯಾಡಿ ವಲಯದ ಪುತ್ತಿಗೆ ಕಾರ್ಯಕ್ಷೇತ್ರದ ಕಳಪ್ಪಾರು ಒಕ್ಕೂಟದ ತ್ರೈಮಾಸಿಕ ಸಭೆ ಆದಿತ್ಯವಾರ ದಂದು ಕಳಪ್ಪಾರು ಶಾಲೆಯಲ್ಲಿ ನೆರವೇರಿತು.
ಕಾರ್ಯಕ್ರಮದಲ್ಲಿ ಕಡಬ ತಾಲೂಕಿನ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಮೇಲ್ವಿಚಾರಕ ಆನಂದ ಡಿ.ಬಿ, ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ.ಎನ್., ಉಪಾಧ್ಯಕ್ಷ ನಾರಾಯಣ ಜಿ.ಸಿ., ಸೇವಾಪ್ರತಿನಿಧಿ ಪ್ರಿಯಲತಾ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಲೋಕೇಶ್ ಬಾಗಿಲುಗದ್ದೆ ಉಪಸ್ಥಿತರಿದ್ದರು.
ಸಭೆಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ತರಗತಿಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಸನ್ಮಾನಿತ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಜೀವನದ ಬಗ್ಗೆ ಅನಿಸಿಕೆಗಳನ್ನು ಹಂಚಿಕೊಂಡರು.
ಯೋಜನಾಧಿಕಾರಿಗಳು ಹಾಗೂ ಮೇಲ್ವಿಚಾರಕರು ಯೋಜನೆಯ ಉದ್ದೇಶ, ಕಾರ್ಯಕ್ರಮಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಮಾರ್ಗದರ್ಶನ ಹಾಗೂ ಮಾಹಿತಿ ನೀಡಿದರು.
ಜನಾರ್ಧನ ಎಸ್. ಸ್ವಾಗತಿಸಿದರು, ಪ್ರಿಯಲತಾ ವಂದಿಸಿದರು. ರುಕ್ಮಿಣಿ ಕಾರ್ಯಕ್ರಮ ನಿರೂಪಿಸಿದರು.










