

ನೆಲ್ಯಾಡಿ: ಉಪ್ಪಿನಂಗಡಿ ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ 8ನೇ ತರಗತಿಯ ವಿದ್ಯಾರ್ಥಿನಿ ಫಾತಿಮತ್ ಮನ್ಹಾ ಉತ್ತಮ ಪ್ರದರ್ಶನ ನೀಡಿದ್ದು, ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾ ಸಂಸ್ಥೆಗಳ ಸಂಚಾಲಕರಾದ ರೆ.ಫಾ.ನೋಮಿಸ್ ಕುರಿಯಾಕೋಸ್, ಕಾರ್ಯದರ್ಶಿಗಳಾದ ರೆ.ಫಾ.ಅನೀಶ್ ಪಾರಾಶೆರಿಲ್, ಪ್ರಾಂಶುಪಾಲರಾದ ಎಂ.ಕೆ. ಏಲಿಯಾಸ್, ಆಡಳಿತ ಮಂಡಳಿ, ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ಹಂತದಲ್ಲೂ ಉತ್ತಮ ಸಾಧನೆಗಾಗಿ ಶುಭಹಾರೈಸಿದರು.










