

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಡಬ ತಾಲೂಕು ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯ ಇಂದು ದೋಂತಿಲ ಶ್ರೀ ಸುಬ್ರಹ್ಮಣ್ಯ ವಿಷ್ಣುಮೂರ್ತಿ ದೇವಾಸ್ಥಾನದಲ್ಲಿ ಭಕ್ತಿಭಾವದಿಂದ ನಡೆಯಿತು.
ಕಾರ್ಯಕ್ರಮದಲ್ಲಿ ದೇವಾಸ್ಥಾನದ ಆಡಳಿತ ಮೊಕ್ತೇಸರ ಸುಬ್ರಹ್ಮಣ್ಯ ಬಾಳ್ತಿಲ್ಲಾಯ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಸೇವಾ ಪ್ರತಿನಿಧಿ ನಮಿತಾ ಎಸ್. ಶೆಟ್ಟಿ, ಹಾಗೂ ಒಕ್ಕೂಟದ ಸದಸ್ಯರು ಹಾಜರಿದ್ದು ಸೇವಾ ಚಟುವಟಿಕೆಯಲ್ಲಿ ಕೈಜೋಡಿಸಿದರು.
ಭಕ್ತರ ನಂಬಿಕೆ ಮತ್ತು ದೇವಾಲಯದ ಪವಿತ್ರತೆಗೆ ಹಾನಿ ಆಗದಂತೆ ಪರಿಸರವನ್ನು ಸ್ವಚ್ಛ ಹಾಗೂ ಶುದ್ಧವಾಗಿ ಉಳಿಸುವುದು ಈ ಕಾರ್ಯಾಚರಣೆಯ ಉದ್ದೇಶ ಎಂದು ಸಂಘಟಕರು ತಿಳಿಸಿದ್ದಾರೆ.










