


ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ವಲಯದಲ್ಲಿ, ಧರ್ಮಾಧಿಕಾರಿ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಡೆಯವರ ಆಶಯದಂತೆ, ಮನೆ-ಮನೆಗಳಲ್ಲಿ ಹಾಗೂ ದೇವಸ್ಥಾನ, ಮಂದಿರ, ಮಠ, ಮಸೀದಿ, ಚರ್ಚ್, ಶಾಲೆ ಮೊದಲಾದ ಧಾರ್ಮಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ, ಈ ವರ್ಷವೂ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ ಮೊದಲು ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವು ಕಡಬ ವಲಯದ ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರ ದೊಡ್ಡಕೊಪ್ಪ, ಶ್ರೀ ಕಂಠೇಶ್ವರ ಮಹಾಗಣಪತಿ ದೇವಸ್ಥಾನ ಕಡಬ, ಶ್ರೀರಾಮ ಭಜನಾ ಮಂದಿರ ಕೋಡಿಂಬಾಳ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳಾರ, ಅಯ್ಯಪ್ಪ ಭಜನಾ ಮಂದಿರ ರೇಂಜಿಲಾಡಿ, ಶ್ರೀ ಉಮಾಮಹೇಶ್ವರಿ ದೇವಸ್ಥಾನ ಬಲ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಿಬಾಳ್ತಿಲ, ಶ್ರೀ ಮಹಾವಿಷ್ಣು ದೇವಸ್ಥಾನ ಪಿಜಕಲ ಹಾಗೂ ಆದಿನಾಗಬ್ರಹ್ಮ ಮುಗೇರ್ ಮತ್ತು ಪರಿವಾರ ದೈವಸ್ಥಾನ ಕಕ್ಕೇನಡ್ಕಗಳಲ್ಲಿ ನೆರವೇರಿತು.
ಸ್ವಚ್ಛತಾ ಕಾರ್ಯದಲ್ಲಿ ಸಮಿತಿ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು, ಊರಿನವರು, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಿದರು ಎಂದು ವಲಯ ಮೇಲ್ವಿಚಾರಕ ವಿಜೇಶ್ ಜೈನ್ ತಿಳಿಸಿದ್ದಾರೆ.










