


ನೆಲ್ಯಾಡಿ: ನೇರ್ಲ-ಇಚ್ಲಂಪಾಡಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಭಾವಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಪೋಷಕರು ಮಧ್ಯಾಹ್ನದವರೆಗೆ ಶ್ರಮದಾನ ಮಾಡಿ ಶಾಲಾ ಪರಿಸರ ಸ್ವಚ್ಛಗೊಳಿಸುವಲ್ಲಿ ಪಾಲ್ಗೊಂಡರು. ಬಳಿಕ ಪೋಷಕರು ತಾವು ತಯಾರಿಸಿದ ವಿಶೇಷ ಆಹಾರ ತಿನಿಸುಗಳನ್ನು ಮಕ್ಕಳಿಗೆ ಪರಿಚಯಿಸಿ ಬಡಿಸಿದರು.
ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ನಂದಾ ಆಟಿಡೊಂಜಿ ದಿನ ಕಾರ್ಯಕ್ರಮ ಮಹತ್ವವನ್ನು ವಿವರಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ಬಿಜೇರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಶಾಲಾ ಶಿಕ್ಷಕಿ ಆಥಿರಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.










