

ನೆಲ್ಯಾಡಿ: ಅಶ್ವಿನಿ ಆಸ್ಪತ್ರೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಉತ್ಸಾಹಭರಿತವಾಗಿ ಜರುಗಿತು. ಎಲುಬು ಮತ್ತು ಕೀಲು ಶಸ್ತ್ರಚಿಕಿತ್ಸಾ ತಜ್ಞರಾದ ಡಾ.ಶಮಂತ್.ವೈ.ಕೆ ಅವರು ಧ್ವಜಾರೋಹಣ ನೆರವೇರಿಸಿ, “ರೋಗಿಗಳ ಆರೈಕೆಯು ದೇಶಸೇವೆಗೆ ಸಮಾನ. ನಮ್ಮ ವೃತ್ತಿ ಕ್ಷೇತ್ರದಲ್ಲೇ ದೇಶಸೇವೆ ಮಾಡುವ ಮನೋಭಾವ ಬೆಳೆಸಬೇಕು” ಎಂದರು.

ಡಾ.ಶರಣ್ಯ ಅವರು ಮಾತನಾಡಿ, ಭಾರತದ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ ಮತ್ತು ಅದರ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೈದ್ಯಕೀಯ ನಿರ್ದೇಶಕ ಡಾ. ಮುರಳೀಧರ ವಹಿಸಿ ಮಾತನಾಡಿದ ಅವರು ರಾಷ್ಟ್ರಧ್ವಜದ ಸಂಕೇತಗಳ ಅರ್ಥವನ್ನು ವಿವರಿಸಿ, ನಾವು ಇರುವ ಜಾಗದಲ್ಲಿ ನಿಷ್ಠೆಯಿಂದ ಕೆಲಸ ಮಾಡುವುದು ದೇಶಸೇವೆಯ ದೊಡ್ಡ ರೂಪ ಎಂದು ಪ್ರತಿಯೊಬ್ಬರಿಗೂ ಪ್ರೇರಣೆಯ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಸಹಾಯಕ ವೈದ್ಯಕೀಯ ನಿರ್ದೇಶಕಿ ಡಾ. ಸುಧಾ ಉಪಸ್ಥಿತರಿದ್ದರು. ಆಸ್ಪತ್ರೆಯ ಮ್ಯಾನೇಜರ್ ಜಾನ್ಸನ್ ಕಾರ್ಯಕ್ರಮವನ್ನು ನಿರೂಪಿಸಿದರು. ಬಿನ್ಸಿ ಅವರು ಸ್ವಾಗತಿಸಿದರು, ಅಶ್ವಿತಾ ವಂದಿಸಿದರು..
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಿಬ್ಬಂದಿ, ವೈದ್ಯರು ಹಾಗೂ ರೋಗಿಗಳು ಉತ್ಸಾಹದಿಂದ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು.











