
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದು, ಆರೋಪಿ ಹಾಗೂ ಕಳವು ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಆ.12ರಂದು ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ಮನೆಯೊಂದರಲ್ಲಿ ಸುಮಾರು 31 ಗ್ರಾಂ ಬಂಗಾರ ಹಾಗೂ ರೂ.5000 ನಗದು ಕಳವಾಗಿದ್ದು ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ನಂತರ, ನೆಟ್ಟಣಿಗೆ ಮುಡೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ ಎಂ (29) ಎಂಬಾತನನ್ನು ಪುತ್ತೂರು ಈಶ್ವರಮಂಗಲದಲ್ಲಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಆರೋಪಿಯಿಂದ 30.120 ಗ್ರಾಂ ಬಂಗಾರ ಹಾಗೂ ಕಳವು ಮಾಡಲು ಬಳಸಿದ ಡಿಸ್ಕವರಿ ಬೈಕ್ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಪತ್ತೆ ಕಾರ್ಯಾಚರಣೆ ಪುತ್ತೂರು ಉಪವಿಭಾಗದ ಡಿ.ವೈ.ಎಸ್.ಪಿ ಅರುಣ್ ನಾಗೇಗೌಡ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಎಸ್ಐ ಜಂಬುರಾಜ್ ಮಹಾಜನ್ ಅವರ ನೇತೃತ್ವದಲ್ಲಿ ನಡೆದಿದ್ದು, ಎಎಸ್ಐ ಚಂದ್ರಶೇಖರ್, ಹೆಚ್.ಸಿ ಪ್ರವೀಣ್, ಮಧು, ಹರೀಶ್, ಸುಬ್ರಹ್ಮಣ್ಯ, ಪಿಸಿ ಆಕಾಶ್, ಯುವರಾಜ್, ಶರಣಪ್ಪ ಪಾಟೀಲ್, ಚಾಲಕ ಯಜ್ಞ, ಹೆಚ್.ಜಿ ಹರಿಪ್ರಸಾದ್ ಹಾಗೂ ನಿತೇಶ್ ತಂಡ ಕಾರ್ಯನಿರ್ವಹಿಸಿತು.












