ಕಡಬ: ಹೊಸಮಠದಲ್ಲಿ ಆರೋಗ್ಯ ತಪಾಸಣಾ ಶಿಬಿರ

ಶೇರ್ ಮಾಡಿ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಕಡಬ ವಲಯದ ಜ್ಞಾನ ವಿಕಾಸ ಕಾರ್ಯಕ್ರಮದಡಿ, ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಸಹಯೋಗದಲ್ಲಿ, ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ), ಗ್ರಾಮ ಪಂಚಾಯಿತಿ ಕುಟ್ರುಪಾಡಿ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಹೊಸಮಠ ಇವುಗಳ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹೊಸಮಠ ಕೃಷಿ ಪತ್ತಿನ ಸಹಕಾರಿ ಸಂಘ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯೋಜನೆಯ ಜಿಲ್ಲಾ ನಿರ್ದೇಶಕರಾದ ಎ. ಬಾಬು ನಾಯ್ಕ ಇಂದಿನ ದಿನಗಳಲ್ಲಿ ಆರೋಗ್ಯವೇ ಅತಿ ಅಮೂಲ್ಯವಾದ ಸಂಪತ್ತು. ಆರೋಗ್ಯವಿದ್ದರೆ ಉಳಿದೆಲ್ಲಾ ಸಂಪತ್ತು ಬದುಕಿನಲ್ಲಿ ಅರ್ಥಪೂರ್ಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವಲಯದ ಅಧ್ಯಕ್ಷ ಕರುಣಾಕರ ಗೋಗಟೆ, “ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಆರೋಗ್ಯ ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಶ್ಲಾಘನೀಯ. ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆಯಬೇಕು” ಎಂದು ಹೇಳಿದರು.

ಶಿಬಿರದಲ್ಲಿ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದ ಡಾ. ಅದ್ವೈತ್ ಪೈ, ಕುಟ್ರುಪಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಮನ, ಹೊಸಮಠ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣಪ್ಪ ದೇವಾಡಿಗ ಸನಿಲ, ಯುವಜನ ಒಕ್ಕೂಟ ಕಡಬ ಅಧ್ಯಕ್ಷ ಶಿವಪ್ರಸಾದ್ ಮೈಲೇರಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷ ರಮೇಶ್ ರೈ ಅರ್ಪಾಜೆ, ಕುಟ್ರುಪಾಡಿ ಗ್ರಾಮ ಪಂಚಾಯತಿ ಸದಸ್ಯ ಕಿರಣ್ ಗೋಗಟೆ, ಜನಜಾಗೃತಿ ಸದಸ್ಯ ಮಹಮ್ಮದ್ ಆಲಿ, ವಿವಿಧ ಒಕ್ಕೂಟಗಳ ಅಧ್ಯಕ್ಷರು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಪುಷ್ಪಲತಾ ವಂದಿಸಿದರು. ಕಾರ್ಯಕ್ರಮವನ್ನು ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ನಿರ್ವಹಿಸಿದರು.

  •  

Leave a Reply

error: Content is protected !!