
ಕೊಕ್ಕಡ: ಹತ್ಯಡ್ಕ ಗ್ರಾಮದ ನೆಕ್ಕರಡ್ಕ ನಿವಾಸಿ, ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ ನಿವೃತ್ತ ಹಿಂದಿ ಶಿಕ್ಷಕರಾಗಿದ್ದ ಮಹಾದೇವ ಹೆಬ್ಬಾರ್ (70) ಅವರು ಆ.17ರಂದು ಹೃದಯಾಘಾತದಿಂದ ಅಕಾಲಿಕವಾಗಿ ಕೊನೆಯುಸಿರೆಳೆದಿದ್ದಾರೆ.
ಮನೆಯಲ್ಲಿ ಇದ್ದಾಗಲೇ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆದರೂ ಮಾರ್ಗಮಧ್ಯೆಯಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಅಧ್ಯಾಪಕ ವೃತ್ತಿಗೆ ಅರ್ಥಪೂರ್ಣ ಕೊಡುಗೆ ನೀಡಿದ್ದ ಹೆಬ್ಬಾರ್ ಅವರು ದೀರ್ಘಕಾಲ ಪ್ರೌಢಶಾಲಾ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಅನೇಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಗೌರವಾನ್ವಿತ ಶಿಕ್ಷಕರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.










