ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನ – ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ

ಶೇರ್ ಮಾಡಿ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣ ವಿಚಾರಣೆ ನಡೆಸಿದ ತಾಲೂಕು ಸಂಚಾರಿ ಪೀಠವು ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಲಾಗಿದೆ ಎಂದು ಉಡುಪಿ ಜಿಲ್ಲೆಯ ಬಿಜೆಪಿ ಮುಖಂಡರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ತಿಮರೋಡಿಗೆ ಎರಡು ಬಾರಿ ನೋಟಿಸ್ ನೀಡಲಾಗಿದ್ದರೂ, ಸರಿಯಾದ ಉತ್ತರ ನೀಡದ ಕಾರಣ ಗುರುವಾರ ಉಜಿರೆಯಿಂದ ಅವರನ್ನು ವಶಕ್ಕೆ ಪಡೆಯಲಾಯಿತು.

ತಿಮರೋಡಿಗೆ ಎರಡು ಬಾರಿ ನೋಟಿಸ್ ನೀಡಲಾಗಿತ್ತು ಅದಕ್ಕೆ ಸರಿಯಾದ ಉತ್ತರ ನೀಡದೇ ಇರುವುದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

  •  

Leave a Reply

error: Content is protected !!