

ನೆಲ್ಯಾಡಿ: ಬೆಥನಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಾರ್ಜ್ ಟಿ. ಎಸ್ ಅವರು ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸುಮಾರು 25 ವರ್ಷಗಳಿಂದ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಹಾಗೂ 12 ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ಜಾರ್ಜ್ ಟಿ ಎಸ್ ಅವರು, ಉತ್ತಮ ಎನ್ನೆಸ್ಸೆಸ್ ಅಧಿಕಾರಿಯಾಗಿ, ಮಾನವ ಹಕ್ಕುಗಳ ಹೋರಾಟ ಸಮಿತಿ ಸದಸ್ಯರಾಗಿ, ಪ್ರಾಚಾರ್ಯರ ಸಂಘದ ತಾಲೂಕು ಪ್ರತಿನಿಧಿಯಾಗಿ, ಜೊತೆಗೆ ಸಂತ ಫಿಲೋಮಿನಾ ಸ್ವಾಯತ್ತ ಸಂಸ್ಥೆಯ ‘ಬೋರ್ಡ್ ಆಫ್ ಸ್ಟಡೀಸ್’ ಸದಸ್ಯರಾಗಿ ಸ್ತುತ್ಯರ್ಹ ಸೇವೆ ಸಲ್ಲಿಸಿದ್ದಾರೆ.











