

ನೆಲ್ಯಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇಚ್ಲಂಪಾಡಿ ಮತ್ತು ಶ್ರೀ ಸಿದ್ಧವಿನಾಯಕ ಭಜನಾ ಮಂದಿರ ಆಡಳಿತ ಸಮಿತಿ ನೇರ್ಲ ಇಚ್ಲಂಪಾಡಿ ಇವರ ಸಹಭಾಗಿತ್ವದಲ್ಲಿ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ.27ರಂದು ಇಚ್ಲಂಪಾಡಿ ನೇರ್ಲ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ನಡೆಯಲಿದೆ. ಅರ್ಚಕ ಹರೀಶ್ ಭಟ್ ಕೋಡಿಂಬಾಳ ಇವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಲಿದ್ದು ಬೆಳಿಗ್ಗೆ 5.30ರಿಂದ ದೇವತಾ ಪ್ರಾರ್ಥನೆ, ಪುಣ್ಯಾಹ ವಾಚನ, ಗಣಹೋಮ ನಡೆದು 7.40ರ ಸಿಂಹ ಲಗ್ನದ ಸುಮೂರ್ತದಲ್ಲಿ ಶ್ರೀ ಗಣಪತಿ ದೇವರ ಪ್ರತಿಷ್ಠೆ ನಡೆಯಲಿದೆ. ಬೆಳಿಗ್ಗೆ 8.30ರಿಂದ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಧಾರ್ಮಿಕ ಸಭೆ;
ಪೂರ್ವಾಹ್ನ 10.30ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿನ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ.ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಶುಭಾಕರ ಹೆಗ್ಗಡೆ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಗಣೇಶೋತ್ಸವ ಸಮಿತಿ ಅಧ್ಯಕ್ಷ ಅವಿನಾಶ್ ಕಟ್ಟತ್ತಂಡ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ಗೌರವಾಧ್ಯಕ್ಷ ಭಾಸ್ಕರ ಎಸ್.ಗೌಡ ಒಡ್ಯತ್ತಡ್ಕ, ಅಧ್ಯಕ್ಷ ಅಕ್ಷಯ್ ನೇರ್ಲ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಇಚ್ಲಂಪಾಡಿ ಒಕ್ಕೂಟದ ಅಧ್ಯಕ್ಷ ಚೆನ್ನಪ್ಪ ಗೌಡ ಕುಡಾಲ, ಕುರಿಯಾಳಕೊಪ್ಪ ಬೇರಿಕೆ ಪದಕ ಗೆಳೆಯರ ಬಳಗದ ಅಧ್ಯಕ್ಷ ಹುಕ್ರಪ್ಪ ಕೆ.ಕುರಿಯಾಳಕೊಪ್ಪ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾಜಿ ಸೈನಿಕ ಡೀಕಯ್ಯ ಪೊಜ್ಜಾಲು, ಇಚ್ಲಂಪಾಡಿ ನೇರ್ಲ ಶಾಲಾ ಮುಖ್ಯಶಿಕ್ಷಕ ಡಾ.ಗಿರೀಶ್, ನಿವೃತ್ತ ಶಾರೀರಿಕ ನಿರ್ದೇಶಕ ಪುರುಷೋತ್ತಮ ಪೂಜಾರಿ ಬದನೆ ಇವರಿಗೆ ಸನ್ಮಾನ ನಡೆಯಲಿದೆ. ಮಧ್ಯಾಹ್ನ ಶ್ರೀ ದೇವರ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮ:
ಮಧ್ಯಾಹ್ನ ಇಚ್ಲಂಪಾಡಿ ನೇರ್ಲ ಸರಕಾರಿ ಉ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಊರವರಿಂದ ರಸಮಂಜರಿ ಎಂ.ಎಫ್.ಸಿ.ಇಚ್ಲಂಪಾಡಿ ಇವರಿಂದ ನಾಸಿಕ್ ಬ್ಯಾಂಡ್ ನಡೆಯಲಿದೆ. ಸಂಜೆ 3 ಗಂಟೆಯಿಂದ ಶ್ರೀ ಮಹಾಗಣಪತಿ ದೇವರ ಭವ್ಯ ಶೋಭಾಯಾತ್ರೆ ನಡೆಯಲಿದೆ.











